ರಾಜ್ಯ ಸರ್ಕಾರದಿಂದ 8 ‘KAS’ ಅಧಿಕಾರಿ, 39 ತಹಶೀಲ್ದಾರ್ ಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.02. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 8 ಕೆಎಎಸ್ ಹಾಗೂ 39 ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ವಿಧಾನಸಭೆ 2023ರ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶದ ಹಿನ್ನಲೆಯಲ್ಲಿ 8 ಕೆಎಎಸ್ ಅಧಿಕಾರಿಗಳು, 39 ತಹಶೀಲ್ದಾರ್ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರಿನ ಆಡಳಿತ ಮತ್ತು ಅಭಿವೃದ್ಧಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿದ್ದಂತ ಕೆಎಎಸ್ ಅಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರನ್ನು ಬಳ್ಳಾರಿಯ ಅಪರ ಜಿಲ್ಲಾ ದಂಡಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿದೆ.

Also Read  ಜೇಸಿಐ ವಲಯ 15ರ ಮಧ್ಯಂತರ ಸಮ್ಮೇಳನ 'ರಂಗೋಲಿ - 2022' ➤ JFM ಕಾಶೀನಾಥ್ ಗೋಗಟೆ ನೇತೃತ್ವದ ಜೇಸಿಐ ಕಡಬ ಕದಂಬ ಘಟಕಕ್ಕೆ ಪ್ರಶಸ್ತಿಗಳ ಸುರಿಮಳೆ

 

error: Content is protected !!
Scroll to Top