ಬೀಟೆ ಮರ ಕಡಿದು ಮಾರಾಟ ಪ್ರಕರಣ  ➤ ಉಪ ಅರಣ್ಯಾಧಿಕಾರಿ ಸಸ್ಪೆಂಡ್..!

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.02. ಮೀಸಲು ಅರಣ್ಯದಲ್ಲಿ ಬೀಟೆ ಮರ ಕಡಿದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಅರಣ್ಯಾಧಿಕಾರಿಯನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅಮಾನತುಗೊಂಡವರು ಎನ್ನಲಾಗಿದೆ.

ಬೀಟೆ ಮರವನ್ನು ಕಡಿದು ಮಾರಾಟ ಮಾಡಿದ್ದಾರೆ ಎಂದು ದರ್ಶನ್ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಡಿಎಫ್ ಒ ಕ್ರಾಂತಿ, ದರ್ಶನ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

Also Read  ನಾಳೆ (ಡಿ. 29) ರಾಜ್ಯಕ್ಕೆ ಗೃಹಸಚಿವ ಅಮಿತ್ ಶಾ ಭೇಟಿ

error: Content is protected !!
Scroll to Top