➤ಫುಟ್‌ಬಾಲ್‌ನಲ್ಲಿ ಗಿನ್ನಿಸ್ ದಾಖಲೆ ಬರೆದ ಮಂಗಳೂರಿನ ಯುವಕ ಮೊಹಮ್ಮದ್ ಶಲೀಲ್

ನ್ಯೂಸ್ ಕಡಬ) newskadaba.com ಮಂಗಳೂರು, ಫೆ.2. ದೇರಳಕಟ್ಟೆ ಬೆಳ್ಮ ನಿವಾಸಿ ಮೊಹಮ್ಮದ್ ಶಲೀಲ್  ಅವರು ಫುಟ್‌ಬಾಲ್‌ನಲ್ಲಿ ವಿಶೇಷ ಸಾಧನೆಗೈದು ಗಿನ್ನೆಸ್ ದಾಖಲೆಗೆ ಸೇರಿದ್ದಾರೆ. ಕೇವಲ ಮೂವತ್ತು ಸೆಕೆಂಡುಗಳಲ್ಲಿ ಫುಟ್​ಬಾಲ್​ನೊಂದಿಗೆ 10 ರೌಂಡ್​ಗಳ ನಟ್ ಮೆಗ್ ಸಾಧಿಸುವ ಮೂಲಕ ಶಲೀಲ್ ಇಬ್ಬರು ಸಾಧಕರ ಹೆಸರಿನಲ್ಲಿದ್ದ ಗಿನ್ನಿಸ್ ದಾಖಲೆಗಳನ್ನು ಮುರಿದಿದ್ದಾರೆ.

ಈ ಹಿಂದೆ ಇಂಗ್ಲೆಂಡ್​ನಲ್ಲಿ 2017ರಲ್ಲಿ ಡೆಲೆ ಎಂಬವರು 30 ಸೆಕೆಂಡುಗಳಲ್ಲಿ 7 ಸುತ್ತುಗಳನ್ನು ಸಾಧಿಸುವ ಮೂಲಕ ಮೊದಲ ಗಿನ್ನೆಸ್ ದಾಖಲೆ ಸಾಧಿಸಿದ್ದರು. ಬಳಿಕ 2021 ರ ಫೆಬ್ರವರಿಯಲ್ಲಿ ಮಹಿಳಾ ಫುಟ್​ಬಾಲ್​ (Football) ಆಟಗಾರ್ತಿ ಅಮೆರಿಕಾದ ತಾಷಾ ನಿಕೋಲ್ ತೇರಾನಿ ಒಂದು ನಿಮಿಷದಲ್ಲಿ 18 ಸುತ್ತುಗಳನ್ನು ಹೊಡೆಯುವ ಮೂಲಕ ಗಿನ್ನೆಸ್ ದಾಖಲೆ ಸಾಧಿಸಿ ಪುಸ್ತಕದ ಪುಟಗಳಲ್ಲಿ ಸೇರಿದ್ದರು. ಇದೀಗ ಇವರಿಬ್ಬರ ದಾಖಲೆಗಳನ್ನು ಮುರಿದಿರುವ ಆರ್.ಬಿ ಅಬ್ದುಲ್ ಹಮೀದ್ ಮತ್ತು ಮುಮ್ತಾಝ್ ದಂಪತಿ ಪುತ್ರ ಮೊಹಮ್ಮದ್ ಶಲೀಲ್ ವಿಶೇಷ ಸಾಧನೆ ಮಾಡಿ ದಾಖಲೆ ನಿರ್ಮಿಸಿದ್ದಾರೆ.

Also Read  ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು

 

error: Content is protected !!
Scroll to Top