ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ ➤ ಮನನೊಂದು ಯುವತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com, ಬೆಳಗಾವಿ ಫೆ.2. ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಹಿನ್ನೆಲೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ  ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ.

ತೇಜಸ್ವಿನಿ ಗಂಗಪ್ಪ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ. ಆಶೀಫ್ ದೇಸಾಯಿ ಎಂಬುವವನು ಪ್ರೀತಿಸಿ ಕೈಕೊಟ್ಟಿರವ ಯುವಕ. ಕಳೆದ ಎರಡು ವರ್ಷದಿಂದ ಪ್ರೀತಿಯ ನಾಟಕವಾಡುತ್ತಿದ್ದ ಆಶೀಫ್, ಕೊನೆಗೆ ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದ. ಈ ಹಿನ್ನೆಲೆ ಮನನೊಂದಿದ್ದ ಯುವತಿ  ಕಳೆದ ಮೂರು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ ಆಶೀಫ್ ಕಾರಣ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿಂದೆಯೂ ಹಾಪ್ ಮರ್ಡರ್ ಕೇಸ್​ನಲ್ಲಿ ಆಶೀಫ್ ಜೈಲಿಗೆ ಹೋಗಿ ಬಂದಿದ್ದ. ಆಶೀಫ್‌ಗೆ ತಕ್ಕ ಶಿಕ್ಷೆಯಾಗಬೇಕು ಅಂತಾ ಯುವತಿ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆರೋಪಿ ಆಶೀಪ್ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top