➤ ಐಇಡಿ ಸ್ಪೋಟ ಭದ್ರತಾ ಸಿಬ್ಬಂದಿಗೆ ಗಾಯ

(ನ್ಯೂಸ್ ಕಡಬ) newskadaba.com, ಸಿಂಗ್ಫೂಮ್, ಫೆ.2. ಜಾರ್ಖಂಡ್ ನ ಪಶ್ಚಿಮ ಸಿಂಗ್ಫೂಮ್ ಜಿಲ್ಲೆಯಲ್ಲಿ ಸುಧಾರಿತ ಸ್ಪೋಟಕ ಸಾಧನ(ಐಇಡಿ) ಬಳಸಿ ಮಾವೋವಾದಿಗಳು ನಡೆಸಿದ ಸ್ಫೋಟದಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಎಂದು  ತಿಳಿದು ಬಂದಿದೆ.

ಮೇರಲ್ ಗಢ ಮತ್ತು ಹಾತಿಪುರ ಗ್ರಾಮದ ನಡುವಣ ಕಾಡಿನಲ್ಲಿ ಮಾವೋವಾದಿಗಳ ಅಡಗುತಾಣಗಳ ಮೇಲೆ ಸಿಆರ್ ಪಿಎಫ್, ಜಾರ್ಖಂಡ್ ಜಾಗ್ವಾರ್ ಮತ್ತು ಜಿಲ್ಲಾ ಶಸಸ್ತ್ರ ಪೊಲೀಸ್ ಪಡೆ ನಡೆಸಿದ ಜಂಟಿ ಕಾರ್ಯಚರಣೆಯ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

Scroll to Top