ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯು ಜನವರಿಯಲ್ಲಿ ಆರಂಭವಾಗಲಿದೆ.

ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಶಃ ಜನವರಿ 15 ರಿಂದ ಕಾಮಗಾರಿ ಆರಂಭಗೊಳ್ಳಲಿರುವ ಕಾರಣದಿಂದ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸುವ ಸಂಬಂಧ ಮುಂದಿನ ವಾರ ಆದೇಶ ಹೊರಡಿಸುವ ಸಾಧ್ಯತೆ ಇದೆ. ಬದಲಿ ರಸ್ತೆಯಾಗಿ ಚಾರ್ಮಾಡಿ ಘಾಟ್ ಮತ್ತು ಸಂಪಾಜೆ ಘಾಟ್ ರಸ್ತೆಯನ್ನು ಆಶ್ರಯಿಸಬೇಕಾಗಿದೆ.

Also Read  ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು

Aik

error: Content is protected !!
Scroll to Top