ಅಯೋಧ್ಯೆ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ➤ ಹೆಚ್ಚಿದ ಪೊಲೀಸ್ ಭದ್ರತೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಫೆ.03. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ನೀಡಿರುವುದಾಗಿ ಅಯೋಧ್ಯೆ ಪೊಲೀಸರು ತಿಳಿಸಿದ್ದಾರೆ.


ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಅಯೋಧ್ಯೆಯ ರಾಮಕೋಟ್ ನಿವಾಸಿಯಾದ ಮನೋಜ್ ಎಂಬವರಿಗೆ ಅಪರಿಚಿತ ನಂಬರ್ನಿಂದ ಕರೆ ಬಂದಿದ್ದು, ಇಡೀ ಶ್ರೀರಾಮ ಜನ್ಮಭೂಮಿ ಸಂಕೀರ್ಣವನ್ನೇ ಸ್ಫೋಟಿಸುವುದಾಗಿ ಆತ ಹೇಳಿದ್ದಾನೆಂದು ಮನೋಜ್ ದೂರು ನೀಡಿದ್ದಾರೆ ಎಂದು ತಿಳಿದ್ದಾರೆ.
ರಾಮಮಂದಿರ ಸ್ಫೋಟಿಸುವುದಾಗಿ ಕರೆ ಮಾಡಿದವನು ಹೇಳಿದ್ದ ಎಂದು ಮನೋಜ್ ಅವರು ನಮಗೆ ಮಾಹಿತಿ ನೀಡುತ್ತಿದ್ದಂತೆ, ನಾವು ಅಯೋಧ್ಯೆಯ ಶ್ರೀರಾಮಮಂದಿರದ ಸುತ್ತ ಸೇರಿ, ಹಲವು ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೆವು. ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದೆವು ಎಂದು ರಾಮ ಜನ್ಮಭೂಮಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಸಂಜೀವ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Also Read  ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು

error: Content is protected !!
Scroll to Top