ಖ್ಯಾತ ನಟ, ನಿರ್ದೇಶಕ ʻಕೆ ವಿಶ್ವನಾಥ್ʼ ಇನ್ನಿಲ್ಲ

(ನ್ಯೂಸ್ ಕಡಬ)newskadaba.com ಹೈದರಾಬಾದ್‌, ಫೆ.03. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕ ಕಾಸಿನಾಧುನಿ ವಿಶ್ವನಾಥ್ ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

92 ವರ್ಷದ ವಿಶ್ವನಾಥ್ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಮತ್ತು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಕಲಾತಪಸ್ವಿ’ ಎಂದೇ ಖ್ಯಾತರಾಗಿರುವ ವಿಶ್ವನಾಥ್, ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಪ್ರಮುಖ ಹೆಸರು ಸಂಪಾದಿಸಿದ್ದು, ಭಾರತೀಯ ಚಿತ್ರರಂಗದ ಅತ್ಯುನ್ನತ ಮನ್ನಣೆಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ 48 ನೇ ಪುರಸ್ಕೃತರಾಗಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

 

 

error: Content is protected !!
Scroll to Top