ಬಂಟ್ವಾಳ: ರೈಲ್ವೆ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

Death, deadbody, Waterfall

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.03. ಬಿ.ಸಿ ರೋಡಿನ ಮುಖ್ಯ ವೃತ್ತದ ಬಳಿ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ ಎನ್ನಲಾಗಿದೆ.

ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವ್ಯಕ್ತಿ ಅಮಲು ಪದಾರ್ಥ ಸೇವಿಸಿ ಮಲಗಿದ್ದ ಎಂದು ಹೇಳಲಾಗಿದೆ. ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿ ಗಳು ಭೇಟಿ ನೀಡಿ ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವರದಿ ತಿಳಿಸಿದೆ.

Also Read  ಭಾರತ - ಆಸ್ಟ್ರೇಲಿಯಾ ಏಕದಿನ ಸರಣಿ ► ಭಾರತಕ್ಕೆ 26 ರನ್‌ಗಳ ಜಯ

 

error: Content is protected !!
Scroll to Top