➤ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬೇಕರಿ ಕೆಲಸಗಾರ

(ನ್ಯೂಸ್ ಕಡಬ) newskadaba.com,ಮಂಗಳೂರು. ಫೆ.2. ಮಂಗಳೂರು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರಿನಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾತ ಖಾದ್ಯ ತಿಂಡಿ ತಯಾರಿಸುವ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಪೊಳಲಿ ನಿವಾಸಿ ಪುರಂದರ(50) ಎಂದು ಗುರುತಿಸಲಾಗಿದೆ. ಮೈಯೆಲ್ಲ ಸುಟ್ಟ ಪುರಂದರ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರು ಪತ್ನಿ ಹಾಗು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Scroll to Top