ಉಳ್ಳಾಲ: ಸಮುದ್ರದಲ್ಲಿ ವೃದ್ದೆಯ ಶವ ಪತ್ತೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.03. ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ದೆಯ ಮೃತದೇಹ ಪತ್ತೆಯಾಗಿದೆ.

ಸುಮಾರು 60-70 ವರ್ಷದ ಮಹಿಳೆಯ ಶವ ಇದಾಗಿದೆ ಎಂದು ಅಂದಾಜಿಸಲಾಗಿದೆ. ಸೀರೆ ಉಟ್ಟಿರುವ ಮಹಿಳೆ ಸಮುದ್ರಕ್ಕೆ ಬಿದ್ದಿರುವ ಸಂಶಯ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಉಳ್ಳಾಲ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

 

error: Content is protected !!

Join the Group

Join WhatsApp Group