(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.03. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು 90,34,970 ರೂ. ಮೌಲ್ಯದ 1617 ಗ್ರಾಂ ತೂಕದ ಚಿನ್ನವನ್ನು ಐವರು ಪುರುಷ ಪ್ರಯಾಣಿಕರಿಂದ ವಶಪಡಿಸಿಕೊಂಡಿದ್ದಾರೆ.
ದುಬೈಯಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಈ ಚಿನ್ನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಟ್ರಾಲಿ ಬ್ಯಾಗ್‌ನ ಬೀಡಿಂಗ್‌ನಲ್ಲಿ, ಗುದನಾಳದಲ್ಲಿ ಬಚ್ಚಿಕೊಂಡು ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಅವರು ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದರು.
