ಕಕ್ಕಿಂಜೆ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಆಟೋ ರಿಕ್ಷಾ ➤ ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಳ್ತಂಗಡಿ, ಜ.03. ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ನದಿಗೆ ಉರುಳಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತ ಮಹಿಳೆಯನ್ನು ಕಕ್ಕಿಂಜೆ ನಿವಾಸಿ ಸಫಿಯಾ ಎಂದು ಗುರುತಿಸಲಾಗಿದೆ. ಕಾಜೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಕ್ಕಿಂಜೆ ಸಮೀಪದ‌ ಮುಂಡಾಜೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ನದಿಗೆ ಉರುಳಿದೆ ಎನ್ನಲಾಗಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

 

Scroll to Top