ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆಂದು ಹೂಡಿಕೆ ಮಾಡಿಸಿಕೊಂಡು 3 ಕೋ.ರೂ. ವಂಚಿಸಿರುವ ಬಗ್ಗೆ ಕಣ್ಣೂರು ಬೋರುಗುಡ್ಡೆಯ ನಿವಾಸಿಯೊಬ್ಬರು ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಹಮ್ಮದ್ ಶಫದ್ ಸಿ.ಕೆ. ಮತ್ತು ಮುಹಮ್ಮದ್ ಅಫೀದ್ ಸಿ.ಕೆ. ಆರೋಪಿಗಳು ಎಂದು ಗುರುತಿಸಲಾಗಿದೆ.

ದೂರುದಾರ ಕಣ್ಣೂರು ಬೋರುಗುಡ್ಡೆಯ ದೂರುದಾರ ವ್ಯಕ್ತಿಯ ಬಳಿ ಪರಿಚಯದ ಮುಹಮ್ಮದ್ ಶಫದ್ ಎಂಬಾತ ತಾನು ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಸಂಪಾದಿಸಿದ್ದು, ಯಾರಾದರೂ ಒಳ್ಳೆಯ ಹೂಡಿಕೆದಾರರು ಇದ್ದರೆ ತಿಳಿಸಿ ಎಂದಿದ್ದ ಎನ್ನಲಾಗಿದೆ. ಅದರಂತೆ ದೂರುದಾರರು ಮುಹಮ್ಮದ್ ಶಫದ್‌ನನ್ನು ಭೇಟಿಯಾಗಿದ್ದು, ಆವಾಗ ಆತ ಲ್ಯಾಪ್‌ಟಾಪ್‌ನಲ್ಲಿ ಕ್ರಿಪ್ಟೋ ವ್ಯವಹಾರದ ಮಾಹಿತಿ ನೀಡುತ್ತಾ ತಿಂಗಳಿಗೆ ಶೇ.25 ಲಾಭಾಂಶ ನೀಡುವುದಾಗಿ ತಿಳಿಸಿದ್ದ ಎಂದು ಹೇಳಲಾಗಿದೆ.

ಮುಹಮ್ಮದ್ ಶಫದ್ ಮತ್ತು ಆತನ ತಮ್ಮ ಮುಹಮ್ಮದ್ ಅಫೀದ್ ದೂರುದಾರರ ಮನೆಗೆ ಭೇಟಿ ನೀಡಿದಾಗ ತಾನು 35 ಲಕ್ಷ ರೂ. ನಗದನ್ನು ಆರೋಪಿ ಸಹೋದರರಿಗೆ ನೀಡಿದ್ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ವರದಿ ತಿಳಿಸಿದೆ.

 

error: Content is protected !!

Join the Group

Join WhatsApp Group