ಮೂಡಬಿದಿರೆ: ನಿಧಾನವಾಗಿ ಹೋಗು ಎಂದದ್ದಕ್ಕೆ ಟಿಪ್ಪರ್ ಚಲಾಯಿಸಿ ಹತ್ಯೆ..!

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.04. ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟೆಬಾಗಿಲಿನ ನಿವಾಸಿ ಪಯಾಝ್ (61) ಹತ್ಯೆಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಪಯಾಜ್ ಕೋಟೆಬಾಗಿಲು ಮಸೀದಿಗೆ ನಮಾಝ್ ಗೆ ತೆರಳುವ ಸಂಧರ್ಭ ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಎಂಬಾತ ಅತೀ ವೇಗದಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ್ದು ಆಗ ಅಲ್ಲೇ ನಡೆದುಕೊಂಡು ಹೋಗುತ್ತಿದ್ದ ಫಯಾಝ್ ಅವರ ಮೇಲೆ ಧೂಳನ್ನು ಹಾರಿಸಿದ್ದಾನೆ . ಆಗ ಕೋಪಗೊಂಡ ಫಯಾಝ್ ಅವರು ನಿಧಾನ ಹೋಗುವಂತೆ ಹೇಳಿದ್ದು ಈ ಸಂದರ್ಭ ಇಬ್ಬರ ಮದ್ಯೆ ಮಾತಿನ ಚಕಾಮಕಿ ನಡೆದಿದೆ ಎಂದು ವರದಿ ತಿಳಿಸಿದೆ.

error: Content is protected !!

Join the Group

Join WhatsApp Group