ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ರಾಯಚೂರು, ಫೆ.04. ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ 17 ವರ್ಷದ ವಿದ್ಯಾರ್ಥಿನಿ ಐಶ್ವರ್ಯ ಶವ ಪತ್ತೆಯಾಗಿದ್ದು, ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಲಿಂಗಸೂಗೂರು ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಕಾಲೇಜು ಆಡಳಿತ ‌ಮಂಡಳಿ ಜೊತೆಗೆ ಚರ್ಚೆ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗಸೂಗೂರು ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top