ಇನ್ಮುಂದೆ ‘ಚರ, ಸ್ಥಿರಾಸ್ತಿ ವಿವರ’ ಸಲ್ಲಿಸಲು ಮಾ.31 ಕೊನೆ ದಿನ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ರಾಜ್ಯ ಸರ್ಕಾರಿ ನೌಕರರು ತಮ್ಮ ಚರ, ಸ್ಥಿರಾಸ್ತಿಯ ವಿವರವನ್ನು ಸಲ್ಲಿಸೋದಕ್ಕೆ ಅವಕಾಶ ನೀಡಲಾಗುತ್ತಿತ್ತು. ಇದೀಗ ಕೊನೆ ದಿನವನ್ನು ಬದಲಾವಣೆ ಮಾಡಲಾಗಿದೆ. ಇನ್ಮುಂದೆ ಮಾರ್ಚ್ 31 ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಸಲು ಕೊನೆಯ ದಿನವಾಗಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ 24ರ ಉಪ ನಿಯಮ (2) ಕ್ಕೆ ತಿದ್ದುಪಡಿಯನ್ನು ತರಲಾಗಿದೆ ಎಂದಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ…

error: Content is protected !!
Scroll to Top