ಮಂಗಳೂರು: ಹಾಡಹಗಲೇ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಹಾಡಹಗಲೇ ಜ್ಯುವೆಲ್ಲರಿ ಶಾಪ್ಗೆ ನುಗ್ಗಿ ಸಿಬ್ಬಂದಿಯನ್ನ ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ‌ಮಂಗಳೂರು ನಗರದ ಹಂಪನಕಟ್ಟೆ ಬಳಿ‌ ನಡೆದಿದೆ.

ಹಂಪನಕಟ್ಟೆಯ ಮಂಗಳೂರು ‌ಜ್ಯುವೆಲ್ಲರಿ ಹೆಸರಿನ ಶಾಪ್ ನಲ್ಲಿ ಘಟನೆ ನಡೆದಿದ್ದು, ಜ್ಯುವೆಲ್ಲರಿ ಸಿಬ್ಬಂದಿ, ಅತ್ತಾವರ ನಿವಾಸಿ ರಾಘವೇಂದ್ರ(50) ಹತ್ಯೆಯಾದವರು ಎಂದು ತಿಳಿದುಬಂದಿದೆ.‌ ಕೇಶವ ಆಚಾರ್ಯ ಎಂಬವರಿಗೆ ಸೇರಿದ ಶಾಪ್ ಇದಾಗಿದ್ದು, ಮಾಲೀಕ ‌ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಒಬ್ಬನೇ ಇದ್ದ ಸಿಬ್ಬಂದಿ ರಾಘವೇಂದ್ರ ಮೇಲೆ ದಾಳಿ ನಡೆಸಲಾಗಿದೆ. ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿಕೊಂಡು ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದು, ಬಂದರು ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Also Read  ಪುಂಜಾಲಕಟ್ಟೆ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

 

error: Content is protected !!
Scroll to Top