ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ; ರಕ್ಷಣೆಗೆ ಮನವಿ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್‌ ಕಮಿಷನರ್‌ ಎನ್.ಶಶಿಕುಮಾರ್ ಅವರಿಗೆ ಶುಕ್ರವಾರ ಪತ್ರಕರ್ತರ ನಿಯೋಗ ಮನವಿ ಸಲ್ಲಿಸಿತು.

ಟೋಲ್‌ಗೇಟ್‌ಗಳಲ್ಲಿ ಸಿಬ್ಬಂದಿಗಳು ಪತ್ರಕರ್ತರು ಸಹಿತ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುತ್ತಿರುವ ಕೃತ್ಯಗಳು ಹೆಚ್ಚಿವೆ. ಪೊಲೀಸ್‌ ಇಲಾಖೆ ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಮನವಿ ಮಾಡಿದರು.

Also Read  ಪುತ್ತೂರು: ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕಿ

error: Content is protected !!
Scroll to Top