ಭಾರೀ ಅಗ್ನಿ ಅನಾಹುತಕ್ಕೆ ಸುಟ್ಟು ಭಸ್ಮವಾದ ಗ್ಯಾರೆಜ್

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಭಾರೀ ಬೆಂಕಿ ಅನಾಹುತಕ್ಕೆ ಗ್ಯಾರೆಜ್ ಒಂದು ಸುಟ್ಟು ಭಸ್ಮವಾದ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ.

ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್‌ಫರ್ಮರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದೆ ಎಂಬ ಪ್ರಾರ್ಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Also Read  ಬಲ್ಗೇರಿಯದ ಸೋಫಿಯಾ: ವಿಶ್ವ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ➤ಭಾರತದ ಕುಸ್ತಿ ಪಟು ಸೋನಂ ಮಲಿಕ್ ಗೆ ಚಿನ್ನ

 

error: Content is protected !!
Scroll to Top