37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ !

(ನ್ಯೂಸ್ ಕಡಬ)newskadaba.com ವಿಜಯಪುರ, ಫೆ.04. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕ ಹಾಗೂ ವಿಜಯಪುರ ಜಿಲ್ಲಾ ಘಟಕಗಳ ಸಯುಕ್ತ ಆಶ್ರಯದಲ್ಲಿ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಆರಂಭಗೊಂಡಿದೆ.

ವಿಜಯಪುರ ಗ್ರಾಮದೇವತೆ ಶ್ರೀ ಸಿದ್ದೇಶ್ವರ ಮಂದಿರದಿಂದ ವಿವಿಧ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ಜರುಗಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರು ಡೊಳ್ಳು ಬಾರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆ ಯುದ್ಧಕ್ಕೂ ವಿವಿಧ ವೇಷಧಾರಿಗಳು ಮೆರವಣಿಗೆ ಶೋಭೆ ಹೆಚ್ಚಿಸಿದವು. ಡೊಳ್ಳು ಕುಣಿತ ಸೇರಿದಂತೆ ಅನೇಕ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡವು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ವಿದ್ಯಾರ್ಥಿಗಳು ಮೆರವಣಿಗೆಯ ಶಿಸ್ತು ಹೆಚ್ಚಿಸಿದರು.

Also Read  ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ


ಮೆರವಣಿಗೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಪುಂಡಲಿಕ ಬಾಳೋಜಿ, ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಹಾಗೂ ಇತರೆ ಪದಾಧಿಕಾರಿಗಳು ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಶಿವಕುಮಾರ ಸ್ವಾಮಿ, ಪೃಥ್ವಿರಾಜ್ ಎಸ್, ಸಂತೋಷ ಚೆಟ್ಟಿ, ಗೋಪಿಚಂದ ತಾಂಡಳೆ ಹಾಗೂ ಇತರರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

 

 

error: Content is protected !!
Scroll to Top