ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಬಂಟ್ವಾಳ ನಿವಾಸಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.05. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಿವಾಸಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ ತೌಫಿಕ್ (23) ಬಂಧಿತ. ತೌಫಿಕ್ ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರ್ಥಿನಿಯೋರ್ವಳನ್ನು ಆಮಿಷ ತೋರಿಸಿ ವಿವಿಧೆಡೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ನೀಡಿದ ದೂರಿನಂತೆ ತನಿಖೆ ನಡೆಸಿದ ಮಂಜೇಶ್ವರ ಪೊಲೀಸರು ತೌಫಿಕ್ ನನ್ನು ಬಂಧಿಸಿದ್ದಾರೆ.

Also Read  ಪ್ರತ್ಯೇಕ 5 ಕಳವು ಪ್ರಕರಣ ಭೇದಿಸಿದ ಕೊಡಗು ಪೊಲೀಸರು

 

error: Content is protected !!
Scroll to Top