ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ ➤ ಮಾಜಿ ಕ್ರಿಕೆಟಿಗನ ವಿರುದ್ಧ FIR

(ನ್ಯೂಸ್ ಕಡಬ)newskadaba.com ಮುಂಬಯಿ, ಫೆ.05. ಪತ್ನಿ ಮೇಲೆ ಹಲ್ಲೆ ನಡೆಸಿ ನಿಂದಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ಎಫ್‌.ಐ.ಆರ್‌ ದಾಖಲಾಗಿದೆ. ಪತ್ನಿ ಆಂಡ್ರಿಯಾ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 324,504 ಅಡಿಯಲ್ಲಿ ಪೊಲೀಸರು ದೂರು ದಾಖಲಿಸಿದ್ದಾರೆ.

ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಯನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಇದಾದ ಬಳಿಕ ಸಿಟ್ಟಿನಲ್ಲಿ ಅಡುಗೆಯ ಕಾವಲಿಯನ್ನು ಪತ್ನಿಯ ಮೇಲೆ ಎಸೆದಿದ್ದಾನೆ. ಇದರಿಂದ ಪತ್ನಿ ಆಂಡ್ರಿಯಾ ತಲೆಗೆ ಗಾಯವಾಗಿದೆ. 12 ವರ್ಷದ ಮಗ ತಂದೆಯನ್ನು ತಡೆಯಲು ಯತ್ನಿಸಿದ್ದಾನೆ. ಇದರ ಬಳಿಕವೂ ಕುಡಿದ ಮತ್ತಿನಲ್ಲಿ ಬ್ಯಾಟ್‌ ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪತ್ನಿ ದೂರಿನಲ್ಲಿ ಹೇಳಿದ್ದಾರೆ.‌ ಗಾಯಗೊಂಡ ಆಂಡ್ರಿಯಾ ಚಿಕಿತ್ಸೆ ಪಡೆದು ಪೊಲೀಸ್‌ ಠಾಣೆಯಲ್ಲಿ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ.

Also Read  ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ

 

error: Content is protected !!
Scroll to Top