ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್‌ ಪಾಸ್‌ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ,05. ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್‌ ಸೇವೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ಹೆಚ್ಚಿಸುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವಿಜಯಪುರದಲ್ಲಿ 2 ದಿನಗಳ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪತ್ರಕರ್ತರನ್ನು ಮೇಲ್ಮನೆಗೆ ನಾಮಕರಣ ಮಾಡುವ ಬೇಡಿಕೆಯನ್ನು ನಗುತ್ತಲೇ ಸ್ಪಂದಿಸಿ, ನಮ್ಮಲ್ಲಿಯೇ ಪೈಪೋಟಿ ಅಧಿಕವಾಗಿದೆ.

ಎಲ್ಲ ರಂಗದಲ್ಲಿರುವ ಮುಖಂಡರು ಬಂದು ನಿಲ್ಲುತ್ತಾರೆ. ಪತ್ರಕರ್ತರು ಮೇಲ್ಮನೆಯಲ್ಲಿ ಸದಸ್ಯರಾಗಬೇಕು ಎಂಬ ಭಾವನೆ ನನಗೂ ಇದೆ. ಆದರೆ, ಈ ಬಗ್ಗೆ ಸಾಧ್ಯಸಾಧ್ಯತೆ ಪರಿಶೀಲನೆ ಮಾಡಬೇಕಿದೆ. ಪತ್ರಕರ್ತರು ಕಾರ್ಮಿಕರಲ್ಲ ಎಂಬುದು ನನ್ನ ಭಾವನೆ. ಹೀಗಾಗಿ, ಪತ್ರಕರ್ತರನ್ನು ಕಾರ್ಮಿಕರ ಪಟ್ಟಿಗೆ ಸೇರ್ಪಡೆ ಮಾಡುವ ಬಗ್ಗೆ ಸಂಘ ಇಟ್ಟಬೇಡಿಕೆಯನ್ನು ಇನ್ನೊಮ್ಮೆ ಪರಿಶೀಲಿಸಲಾಗುವುದು ಎಂದರು ಎನ್ನಲಾಗಿದೆ.

Also Read  ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ                                                            

 

 

error: Content is protected !!
Scroll to Top