(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.05. ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ಬ್ಯಾಡರಹಳ್ಳಿಯ ಕೆ.ಹರೀಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ ಸಮಾಜಕ್ಕೆ ತಪ್ಪು ಸೂಚನೆ ನೀಡಿದಂತಾಗುತ್ತದೆ ಎಂದಿರುವ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅಲ್ಲದೆ, ಇದು ನ್ಯಾಯಾಂಗದ ವಿಶ್ವಾಸಾರ್ಹತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದೂ ನ್ಯಾಯಾಲಯ ಹೇಳಿದೆ.
ಜೀವನದ ಪ್ರತಿಯೊಂದು ಹಂತದಲ್ಲೂ ಗ್ರಹಣವಾಗಿರುವ ಕಪ್ಪುಹಣದ ಹರಿವನ್ನು ಬಯಲಿಗೆಳೆಯಲು ತನಿಖಾ ಸಂಸ್ಥೆಯು ವಿಷಯದ ಮೂಲಕ್ಕೆ ಹೋಗಬೇಕಾಗಿದೆ. ಅದರ ಫಲಿತಾಂಶವು ನಮ್ಮ ಕಲ್ಪನೆಯನ್ನು ಮೀರಿರುತ್ತದೆ ಎಂದು ನ್ಯಾಯಮೂರ್ತಿ ಎಂಜಿ ಉಮಾ ಅವರು ಆದೇಶ ಹೊರಡಿಸಿದ್ದಾರೆ.