ಮಂಗಳೂರು: ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ..!

Death, deadbody, Waterfall

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಡೆದಿದೆ.

ಕುದ್ರೋಳಿ ನಿವಾಸಿ ರಿಯಾಝ್‌ ಎಂಬವರ ಪುತ್ರಿ ಖತೀಜಾ ರೀನಾ(16)ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದರ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

 

 

Scroll to Top