ರಿಯಾದ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಫೆ.06. ಅನಾರೋಗ್ಯದಿಂದ ಬಳಲುತ್ತಿದ್ದ ಅನಿವಾಸಿ ಭಾರತೀಯ ವಿದ್ಯಾರ್ಥಿನಿ ರಿಯಾದ್ ನಲ್ಲಿ ಮೃತಪಟ್ಟಿದ್ದಾರೆ.

ಕೇರಳದ ತ್ರಿಶೂರ್ ಮೂಲದ ಅನಸ್ ಮತ್ತು ಶೈನಿ ಅವರ ಮಗಳು ಆಮೀನಾ ಮೃತರು ಎಂದು ತಿಳಿದುಬಂದಿದೆ. ಇವರು ರಿಯಾದ್ ನ ನೂರ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು. ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೀಗ ಆಮೀನಾ ಮೃತದೇಹವನ್ನು ರಿಯಾದ್ ನಲ್ಲೇ ದಹನ ಕಾರ್ಯ ನಡೆದಿದೆ ಎಂದು ವರದಿ ತಿಳಿಸಿದೆ.

error: Content is protected !!
Scroll to Top