ಬಂಟ್ವಾಳ: ಕಾರಿಂಜ ಕ್ಷೇತ್ರದ ಸುತ್ತಮುತ್ತಲ 2 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.06. ಬಂಟ್ವಾಳ ತಾಲ್ಲೂಕಿನಲ್ಲಿರುವ ಪಾರ್ವತಿ ಪರಮೇಶ್ವರ ಆವಾಸಸ್ಥಾನವಾದ ಶ್ರೀ ಕಾರಿಂಜೇಶ್ವರ ದೇವಾಲಯದ ಸುತ್ತಮುತ್ತಲಿನ 2 ಕಿ .ಮೀ. ವ್ಯಾಪ್ತಿಯನ್ನು ಗಣಿಗಾರಿಕಾ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಡಾ. ರವಿ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.


ಶ್ರೀ ಕಾರಿಂಜೇಶ್ವರ ಕ್ಷೇತ್ರ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಮತ್ತು ಪಾವಿತ್ರ್ಯತೆ ಉಳಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತಿರುಲೇಶ್ ಬೆಳ್ಳೂರು, ಇವರು ಕರ್ನಾಟಕ ಸರ್ಕಾರದ ಗೌರವಾನ್ವಿತ ಮಾನ್ಯ ಮುಖ್ಯಮಂತ್ರಿಗಳಿಗೆ ಉಲ್ಲೇಖ (1) ರಲ್ಲಿ ಮನವಿಯನ್ನು ಸಲ್ಲಿಸಿದ್ದರು. ಮಾನ್ಯ ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳು ಸದರಿ ಮನವಿಯ ಕುರಿತು ಕೂಡಲೇ ಕ್ರಮಜರುಗಿಸಲು ಉಲ್ಲೇಖ (2) ರ ಪತ್ರದಲ್ಲಿ ನಿರ್ದೇಶನ ನೀಡಿತ್ತು.

Also Read  ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಮೂಲ ಸೌಕರ್ಯಗಳ ಸಮಸ್ಯೆ;ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ಅನುದಾನ ನೀಡುವಂತೆ ಬಿಜೆಪಿ ಆಗ್ರಹ

 

error: Content is protected !!
Scroll to Top