ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಕೊಲೆ ಮಾಡಿ ಅಂಗಡಿಯಿಂದ ಚಿನ್ನಾಭರಣ ದರೋಡೆ ಮಾಡಿಕೊಂಡು ದುಷ್ಕರ್ಮಿ ಪರಾರಿಯಾಗಿದ್ದ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿ ಪೊಲೀಸ್ ತನಿಖೆಯ ವೇಳೆ ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ದುಷ್ಕರ್ಮಿ ಆಟೋದಲ್ಲಿ ಪರಾರಿಯಾಗಿರುವುದು ಸೆರೆಯಾಗಿತ್ತು. ಇದೀಗ ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿ ಯಾವ ಕಡೆ ಹೋಗಿದ್ದಾನೆ ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ.

Also Read  ಕರ್ನಾಟಕ ಪತ್ರಕರ್ತರ ಸಂಘದಿಂದ ಬೆಟ್ಟಂಪಾಡಿ ಸ.ಪ್ರ.ದ.ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ, ಸೈಬರ್ ಕ್ರೈಮ್ ಮಾಹಿತಿ ಕಾರ್ಯಾಗಾರ

 

error: Content is protected !!
Scroll to Top