ದ.ಕ ಜಿಲ್ಲೆಗೆ ಎರಡು ಬಹುಗ್ರಾಮ ಮಲತ್ಯಾಜ್ಯ ಘಟಕ ➤ ಉಜಿರೆಯಲ್ಲಿ ನಿರ್ಮಾಣ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮಲತ್ಯಾಜ್ಯ ನಿರ್ವಹಣೆಯ 16 ಘಟಕಗಳನ್ನು ಪ್ರಾಯೋಗಿಕವಾಗಿ ನಿರ್ಮಿಸುತ್ತಿದ್ದು, ಅವುಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೋಳ್ತಮಜಲು ಮತ್ತು ಬೆಳ್ತಂಗಡಿ ತಾಲೂಕಿನ ಉಜಿರೆ ಘಟಕಗಳು ಸೇರಿವೆ.

ಈ ಎರಡೂ ಘಟಕಗಳ ಕಾಮಗಾರಿ ಪೂರ್ಣಗೊಂಡು, ಪರೀಕ್ಷಾರ್ಥ ಕಾರ್ಯಾರಂಭಿಸಿದ್ದು, ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಣೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯದಡಿ ಸುಸ್ಥಿರತೆ ಕಾಯ್ದುಕೊಳ್ಳುವ ಸಲುವಾಗಿ ನಿರ್ಮಿಸಲಾದ ಜಿಲ್ಲೆಯ ಮೊದಲ ಮಲತ್ಯಾಜ್ಯ ನಿರ್ವಹಣಾ ಘಟಕಗಳೆಂಬ ಹೆಗ್ಗಳಿಕೆಯೊಂದಿಗೆ ಸೋಮವಾರ ಗೋಳ್ತಮಜಲು ಗ್ರಾಮದ ಚಿಮಿಣಿಗುರಿ ಎಂಬಲ್ಲಿ ಲೋಕಾರ್ಪಣೆಗೊಳ್ಳಲಿದೆ.

Also Read  ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

error: Content is protected !!
Scroll to Top