ಮಿತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಓಮ್ನಿ ಪಲ್ಟಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22. ಓಮ್ನಿ ಕಾರೊಂದು ಢಿಕ್ಕಿಯಾಗಿ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಿತ್ತೂರು ತಿರುವಿನಲ್ಲಿ ನಡೆದಿದೆ.

ಮೃತರನ್ನು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಕರಿಮಜಲು ನಿವಾಸಿ ಬಾಲಕೃಷ್ಣ(33 ವ.) ಎಂದು ಗುರುತಿಸಲಾಗಿದೆ. ಇವರು ಮಿತ್ತೂರು ತಿರುವಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾಣಿ ಕಡೆಯಿಂದ ಬಂದ ಕೇರಳ ನೋಂದಣಿಯ ಓಮ್ನಿ ಕಾರು ಇವರಿಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಬಾಲಕೃಷ್ಣರವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಸ್ವಲ್ಪ ದೂರದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಓಮ್ನಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  How to Select the Best Virtual Data Room Software

error: Content is protected !!
Scroll to Top