ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ನಿಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್​. ವರ್ಮಾ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವರ್ಮಾ ಅವರಿಗೆ 76 ವರ್ಷ ವಯಸ್ಸಾಗಿದ್ದು, ಪರಿಸರ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಚಿತ್ರ ಬರೆಯುವ ಮೂಲಕ ಎಲ್ಲರ ಗಮನಸೆಳೆದಿದ್ದರು ಎಂದು ವರದಿ ಪ್ರಕಟಣೆ ತಿಳಿಸಿದೆ. ಬಿಕೆಎಸ್ ವರ್ಮಾ ಅವರಿಗೆ ಬೆಂಗಳೂರು ವಿವಿಯಿಂದ 2011ರಲ್ಲಿ ಗೌರವ ಡಾಕ್ಟರೇಟ್ ನೀಡಲಾಗಿತ್ತು.

Also Read  ಹೋಟೆಲ್ ನಲ್ಲಿ ಲೇಟ್ ನೈಟ್ ಲೇಡಿಸ್ ಪಾರ್ಟಿ ➤ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು

 

error: Content is protected !!
Scroll to Top