ನಿಂತಿದ್ದ ಲಾರಿಗೆ ಬಸ್ ಢಿಕ್ಕಿ  ➤  ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.06. ರಸ್ತೆಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಢಿಕ್ಕಿ ಹೊಡೆದ ಪರಿಣಾಮ ಚಾಲಕನೋರ್ವ ಸ್ಥಳದಲ್ಲಿ ಮೃತಪಟ್ಟಿದ್ದು, ಇತರೆ 9 ಜನರಿಗೆ ಗಾಯಗಳಾದ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ಸಂಭವಿಸಿದೆ.

ಘಟನೆಯಲ್ಲಿ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತಕ್ಕೀಡಾದ ಬಸ್ ಬಳ್ಳಾರಿಯಿಂದ ಬೀದರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ ಎಂದು ಪೊಲೀಸ್ ಠಾಣೆ ಪಿಎಸ್‌ಐ ತಿಳಿಸಿದ್ದಾರೆ.

Also Read  ಬಂಟ್ವಾಳ: ಅಪ್ರಾಪ್ತ ಬಾಲಕಿ ನಾಪತ್ತೆ!

 

error: Content is protected !!
Scroll to Top