(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.06. ಕಂಪ್ಯೂಟರ್ಗಳ ಬೇಡಿಕೆ ಕುಸಿತದ ಕಾರಣ 6,650 ಮಂದಿ ಉದ್ಯೋಗಿಗಳನ್ನು ವಜಾಗೊಳಿಸಲು ಚಿಂತನೆ ನಡೆಸಿರುವುದಾಗಿ ಡೆಲ್ ತಿಳಿಸಿದೆ.
ಕಂಪನಿಯ ಒಟ್ಟು ಉದ್ಯೋಗಿಗಳ ಶೇ 5ರಷ್ಟು ಮಂದಿ ಮೇಲೆ ಉದ್ಯೋಗ ಕಡಿತ ಪರಿಣಾಮ ಬೀರಲಿದೆ ಎನ್ನಲಾಗಿದೆ. ಕಂಪನಿಯು ಕಠಿಣ ಮಾರುಕಟ್ಟೆ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಭವಿಷ್ಯವೂ ಅನಿಶ್ಚಿತವಾಗಿದೆ. ಪರ್ಸನಲ್ ಕಂಪ್ಯೂಟರ್ ಉದ್ಯಮವು ಪ್ರಸ್ತುತ ಜಾಗತಿಕವಾಗಿ ಎದುರಿಸುತ್ತಿರುವ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಲುವಾಗಿ ಉದ್ಯೋಗ ಕಡಿತ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.