ಕಡಬದ ಏಮ್ಸ್ ಕಾಲೇಜಿನಲ್ಲಿ ನಾಳೆ(ಡಿ.23) ಸ್ನೇಹ ಸಮ್ಮಿಲನ ► ಪೂರ್ವ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಎ.ಎಂ.ಎಸ್ ಮತ್ತು ಏಮ್ಸ್ ಹಳೇ ವಿದ್ಯಾರ್ಥಿ ಸಂಘಗಳ ಒಕ್ಕೂಟದ ವತಿಯಿಂದ ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಪೂರ್ವ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮವು ಶನಿವಾರ ಬೆಳಿಗ್ಗೆ 09.30 ಕ್ಕೆ ಏಮ್ಸ್ ಪ್ರಥಮ ದರ್ಜೆ ಕಾಲೇಜು ಆವರಣದ ಗೋಪಾಲರಾವ್ ವೇದಿಕೆಯಲ್ಲಿ ನಡೆಯಲಿದೆ.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಸೆಮೀರಾ ಕೆ.ಎ. ನಿರ್ವಹಿಸಲಿದ್ದು, ಏಮ್ಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಕುಮಾರಿ ಫೌಝಿಯಾ ಬಿ.ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Also Read  ಜಿಲ್ಲಾಧಿಕಾರಿಯಿಂದ ಗೃಹಲಕ್ಷ್ಮೀ ಅರ್ಜಿ ನೋಂದಣಿ ಪ್ರಕ್ರಿಯೆ ವೀಕ್ಷಣೆ

error: Content is protected !!
Scroll to Top