➤ನಗರದ ನಾಯಂಡಳ್ಳಿ ಜಂಕ್ಷನ್ ಗೆ ನಟ ಪುನಿತ್ ರಾಜ್ ಕುಮಾರ್ ಹೆಸರು ನಾಮಕರಣ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.6. ನಗರದ ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಸುಮಾರು 12 ಕಿಲೋ ಮೀಟರ್ ರಸ್ತೆಗೆ ಪುನೀತ್ ರಾಜ್ ಕುಮಾರ್ ರಸ್ತೆ ಎಂದು ಹೆಸರಿಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.

ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ‌ ಹರೀಶ್ ಅವರೊಂದಿಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಪುನೀತ್ ರಾಜ್ ಕುಮಾರ್ ಅವರು ನಮ್ಮ ಮಧ್ಯೆ ಇಲ್ಲ ಅವರನ್ನು ಸದಾ ಜೀವಂತವಾಗಿರಿಸುವ ಪ್ರಯತ್ನ ಮಾಡಲಾಗಿದೆ ಎಂದರು.

Also Read  'ಇನ್ಸ್ಪೈರ್ ಅವಾರ್ಡ್ ಮಾನಕ್' ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್  ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆಎಸ್ ಬಿವಿ ವತಿಯಿಂದ ಸನ್ಮಾನ

ಪುನೀತ್ ರಾಜ್ ಕುಮಾರ್ ಹೃದಯವಂತ ಮನುಷ್ಯ. ಬಡವರ ಬಗ್ಗೆ, ವಿದ್ಯಾರ್ಥಿಗಳ ಬಗ್ಗೆ, ಅನಾಥಾಶ್ರಮಗಳ ಬಗ್ಗೆ ಅವರಿಗಿದ್ದ ಕಾಳಜಿ ಬಹಳ ವಿಶಾಲವಾದದ್ದು. ಅವರ ನೆನಪು ಮುಂದಿನ ಪೀಳಿಗೆಗೂ ತಲುಪಬೇಕು ಎಂಬ ದೃಷ್ಟಿಯಿಂದ ನಾಯಂಡಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ಮೆಗಾ ಸಿಟಿ ಮಾಲ್ ಜಂಕ್ಷನ್ ವರೆಗಿನ ರಸ್ತೆಗೆ ಪುನೀತ್ ಹೆಸರಿಡಲು ನಿರ್ಧರಿಸಲಾಗಿದೆ ಎಂದರು.

error: Content is protected !!
Scroll to Top