ಇಂದು (ಫೆ.07) ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಫೆ.07. ರಾಷ್ಟ್ರೀಯ ಆರೋಗ್ಯ ಮಿಷನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ, ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ, ಪುತ್ತೂರು ತಾಲೂಕು ಆರೋಗ್ಯ ಕಛೇರಿ, ಎ.ಬಿ. ಶೆಟ್ಟಿ ದಂತ ವೈದ್ಯಕೀಯ ಕಾಲೇಜು ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವು ಕಡಬದ ಸಮುದಾಯ ಆರೋಗ್ಯ ಕೇಂದ್ರದ ನಡೆಯಲಿದೆ.

ಬಾಯಿಯ ತಪಾಸಣೆ ಹಾಗೂ ಸಲಹೆ, ಹುಳುಕು ಹಲ್ಲಿನ ಚಿಕಿತ್ಸೆ, ಮಕ್ಕಳ ಹುಳುಕು ಹಲ್ಲಿನ ತಪಾಸಣೆ ಹಾಗೂ ಚಿಕಿತ್ಸೆ, ಬಾಯಿಯ ಕ್ಯಾನ್ಸರ್ ಪೂರ್ವ ಲಕ್ಷಣಗಳ ಪತ್ತೆ, ದಂತ ಭಾಗ್ಯ ಫಲಾನುಭವಿಗಳ ಗುರುತಿಸುವಿಕೆ ಹಾಗೂ ತಂಬಾಕು ಮುಕ್ತಗೊಳಿಸಲು ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ಚಿಕಿತ್ಸೆಗಳು ದೊರೆಯಲಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Scroll to Top