ಬೈಕ್‌ ಸವಾರನ ತಲೆಮೇಲೆ ಹರಿದ ಶಾಸಕನ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 07. ಹಿಟ್ ಆಂಡ್ ರನ್ ಗೆ ಬೈಕ್ ಸವಾರನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇಲ್ಲಿನ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಶಾಸಕ ಹರತಾಳು ಹಾಲಪ್ಪ ಅವರ ಸ್ಟಿಕ್ಕರ್‌ ಹೊಂದಿದ್ದ ಕಾರೊಂದು ಬೈಕ್‌ ಸವಾರನಿಗೆ ಢಿಕ್ಕಿಯಾಗಿದ್ದು, ಪರಿಣಾಮ ಕೆಳಕ್ಕೆ ಬಿದ್ದ ಸವಾರನ ತಲೆಮೇಲೆ ಕಾರು ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Scroll to Top