(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.07. ಮುಂಬರುವ ವಿಧಾನಸಭೆ ಚುನಾವಣಾ ಅಖಾಡ ಜೋರಾಗಿದ್ದು, ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಇದಕ್ಕಾಗಿ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪಟ್ಟಿಯನ್ನು ಅಂತಿಮಗೊಳಿಸುವ ಕುರಿತಂತೆ ಕೆಲವು ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ.
ಅಭ್ಯರ್ಥಿಗಳ ಪಟ್ಟಿ ಬಹುತೇಕ ಪೂರ್ಣಗೊಂಡಿದ್ದು ಈ ಪಟ್ಟಿಯು ಶೀಘ್ರದಲ್ಲಿ ವರಿಷ್ಠರ ಸೇರುವುದಷ್ಟೇ ಬಾಕಿಯಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಹತ್ವದ ಸಭೆಯನ್ನ ಇತ್ತೀಚೆಗಷ್ಟೇ ನಡೆದಿತ್ತು ಎನ್ನಲಾಗಿದೆ.
Also Read ಮನೆಯಲ್ಲಿ ಸಣ್ಣ ಸಣ್ಣ ಕಿರಿಕಿರಿ ಗಂಡ ಹೆಂಡತಿ ಜಗಳ ಮನಸ್ತಾಪ ಉಂಟಾಗಲು ಕಾರಣಗಳು | ಸೂಕ್ತ ನಿವಾರಣೆ ಇಲ್ಲಿದೆ