(ನ್ಯೂಸ್ ಕಡಬ)newskadaba.com ಉಜಿರೆ, ಫೆ.07. ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ವರಿಷ್ಠಾಧಿಕಾರಿ ( ಎಸ್.ಪಿ.)ವಿಕ್ರಮ್ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ, ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಮತ್ತು ಸಿಬಂದಿಗಳ ತಂಡಗಳು ಏಕಕಾಲದಲ್ಲಿ ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ದಾಳಿ ಮಾಡಿದೆ.