ದೇವಸ್ಥಾನ ಕಳ್ಳತನ ಮಾಡಿ ಓಡಿ ಹೋಗುವಾಗ ಅಪಘಾತದಲ್ಲಿ ಸಿಕ್ಕಿಬಿದ್ದ ಕಳ್ಳರು

(ನ್ಯೂಸ್ ಕಡಬ)newskadaba.com ಕಾರವಾರ,ಫೆ.07. ದೇವಸ್ಥಾನದಲ್ಲಿ ಕಳ್ಳತನ ಮಾಡಿ ಬಳಿಕ ತಪ್ಪಿಸಿಕೊಳ್ಳಲು ಹೋಗಿ ಅಪಘಾತವಾಗಿ ಕಳ್ಳರು  ಸಿಕ್ಕಿಬಿದ್ದಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಎಕ್ಕೆಗೋಳಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆಎಂದು ವರದಿಯಾಗಿದೆ.

.

ಶಿವಮೊಗ್ಗ ಮೂಲದ ಇರ್ಫಾನ್ ಹಾಗೂ ಆರೀಫ್ ಬಂಧನಕ್ಕೊಳಗಾದ ಕಳ್ಳರು. ದೇವಸ್ಥಾನದ ಬೀಗ ಮುರಿದು 55 ಸಾವಿರ ರೂ. ಹಣ ಮತ್ತು ದೇವರ ಪರಿಕರಗಳನ್ನು ಕಳ್ಳರು ಕಳ್ಳತನ ಮಾಡಿದರು . ಜನರು ಅಟ್ಟಿಸಿಕೊಂಡು ಬಂದಾಗ ತಪ್ಪಿಸಿಕೊಂಡು ಹೋಗಿದ್ದ ಕಳ್ಳರ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಕಳ್ಳರು ಸಿಕ್ಕಿಬಿದ್ದಿದ್ದಾರೆ. ಭಟ್ಕಳ ಪೊಲೀಸರಿಗೆ ಮಾಲು ಸಮೇತ ಸ್ಥಳೀಯರು ವಶಕ್ಕೆ ನೀಡಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Also Read  ಪರೀಕ್ಷೆ ಭರದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್ ಕ್ಯಾರ್

 

 

error: Content is protected !!
Scroll to Top