ಚಲಿಸುತ್ತಿದ್ದ ಬಸ್ ನ ಚಕ್ರದಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಯಂಬತ್ತೂರು, ಫೆ. 07. ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಚಕ್ರದಡಿ ಸಿಲುಕಿ 22 ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಕೇರಳದ ಮರೈಯೂರ್‌ನ ಮದನ್‌ಲಾಲ್ ಎಂದು ಗುರುತಿಸಲಾಗಿದೆ. ಈತ ಕೊಯಂಬತ್ತೂರಿನಿಂದ ಪಳನಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಗೆ ಹತ್ತಿದ್ದು, ಈ ವೇಳೆ ಬಸ್ ತಿರುವು ತೆಗೆದುಕೊಳ್ಳುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮದನಲಾಲ್ ಕೆಳಗೆ ಬಿದ್ದು, ಆಗ ಬಸ್​ನ ಹಿಂಬದಿ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Also Read  ಮಂಗಳೂರಿನಲ್ಲಿ ಭೀಕರ ಅಪಘಾತ - ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರು

error: Content is protected !!
Scroll to Top