ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ  ➤ ಸ್ವಯಂಪ್ರೇರಿತ ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 07. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಅವರು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ವಿಚಾರಣೆ ಆರಂಭಿಸಿದ್ದಾರೆಂದು ವರದಿ ತಿಳಿಸಿವೆ. ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಮಾಧ್ಯಮದಲ್ಲಿ ಪ್ರಕಟಗೊಂಡ ವರದಿ ಆಧರಿಸಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಉಪಲೋಕಾಯುಕ್ತರು, 4 ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ವಿಕ್ಟೋರಿಯಾ ಆಸ್ಪತ್ರೆಗೆ ನೋಟಿಸ್‌ ಜಾರಿಗೊಳಿಸಿದ್ದಾರೆ ಎನ್ನಲಾಗಿದೆ.

Also Read  ಸುಳ್ಯ: ಪ್ರವಾದಿಯನ್ನು ನಿಂದಿಸಿದಾತನ ಬಂಧನಕ್ಕೆ ಎಸ್ಡಿಪಿಐ ಆಗ್ರಹ

error: Content is protected !!
Scroll to Top