(ನ್ಯೂಸ್ ಕಡಬ)newskadaba.com ಮಂಗಳೂರು, ಫೆ,07. ತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಸರ್ಕಾರ ಸಮಿತಿ ರಚನೆಗೆ ಮುಂದಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್ ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯ ಏನಿತ್ತು ? ಸಮಿತಿ ರಚಿಸುವ ಬದಲು ರಾಜ್ಯದಲ್ಲಿ ತುಳುವನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು,’’ ಎಂದು ಹೇಳಿದರು.