➤ಪತ್ನಿಯನ್ನು ಕೊಡಲಿಯಿಂದ ಕೊಚ್ಚಿಕೊಂದ ಪಾಪಿ ಪತಿ

(ನ್ಯೂಸ್ ಕಡಬ) newskadaba.com. ಗದಗ,  ಫೆ.7. ಪತ್ನಿಯ ನಡತೆಯ ಮೇಲೆ ಅನುಮಾನಗೊಂಡ ಪತಿ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಗಜೇಂದ್ರಗಡ ತಾಲೂಕಿನ ಬೇವಿನಕಟ್ಟೆ ಗ್ರಾಮದಲ್ಲಿ ನಡೆದಿದೆ.ವಿದ್ಯಾಮೌನೇಶ್ ಆಡಿನ(24) ಕೊಲೆಯಾದ ಮಹಿಳೆ.

ಮೃತ ಮಹಿಳೆಯ ಗಂಡ ಆಗಾಗ ತನ್ನ ಪತ್ನಿಯ ನಡತೆಯ ಮೇಲೆ ಅನುಮಾನ ಪಡುತ್ತಿದ್ದು, ಈ ವಿಚಾರವಾಗಿ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು, ಜಗಳ ವಿಕೋಪಕ್ಕೆ ತಿರುಗಿ ಪತಿ ಮೌನೇಶ್(29) ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top