ಮೈಸೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ  ➤   ಟೆಸ್ಟ್‌ ಹೆಚ್ಚಳ

(ನ್ಯೂಸ್ ಕಡಬ)newskadaba.com ಮೈಸೂರು, ಫೆ.08.  ವರ್ಷದ ಆರಂಭದಲ್ಲಿಯೇ ಮಲೇರಿಯಾ, ಪ್ರಕರಣಗಳು ಹೆಚ್ಚಾಗಿರುವುದರಿಂದ ರೋಗ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಈ ಸಾಲಿನಲ್ಲಿ ಹತ್ತು ಸಾವಿರ ಡೆಂಗ್ಯೂ ಪರೀಕ್ಷೆ ಮಾಡುವ ಗುರಿ ಹಾಕಿಕೊಂಡಿದೆ ಎಂದು ವರದಿಯಾಗಿದೆ.

ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣ ದಾಖಲಾಗುತ್ತವೆ. ಆದರೆ, ಪ್ರಸಕ್ತ ಸಾಲಿನಲ್ಲಿ ವರ್ಷದ ಆರಂಭದಲ್ಲೇ ಹೆಚ್ಚು ಜನರಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಮೈಸೂರು ಜಿಲ್ಲೆಯಾದ್ಯಂತ ಜನವರಿಯಲ್ಲಿ 427 ಮಂದಿ ಡೆಂಗ್ಯೂ ಪರೀಕ್ಷೆ ಮಾಡಿಸಿಕೊಂಡಿದ್ದು, 43 ಜನರಲ್ಲಿ ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಡೆಂಗ್ಯೂ ಉಲ್ಬಣಗೊಂಡಿರುವುದು ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.

Also Read  ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ...? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ

 

 

 

 

error: Content is protected !!
Scroll to Top