(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ,ಫೆ.08. ಸಮಗ್ರ ಶಿಕ್ಷಣ ಕರ್ನಾಟಕ ನಡೆಸಿದ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 688 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಕುಂದಗೋಳ ತಾಲೂಕಿನಲ್ಲಿಯೇ ಅತಿ ಹೆಚ್ಚು (230) ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವರದಿಯಾಗಿದೆ.
2022 ಡಿಸೆಂಬರ್ 28ರಿಂದ 2023ರ ಜ. 5ರ ವರೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಈ ಮಾಹಿತಿ ಲಭ್ಯವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಎಲ್ಲ ಜಿಲ್ಲೆಗಳಿಗೆ ಸೂಚನೆ ನೀಡಿದ್ದು, ಅದರಂತೆ ರಾಜ್ಯಾದ್ಯಂತ ಏಕಕಾಲದಲ್ಲಿ ಸಮೀಕ್ಷೆ ನಡೆದಿತ್ತು. ಧಾರವಾಡ ಜಿಲ್ಲಾಮಟ್ಟದಲ್ಲಿ ಸಿಆರ್‌ಪಿ, ಬಿಆರ್‌ಸಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಈ ಸಮೀಕ್ಷೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.