➤ ರೆಪೋ ದರ ಏರಿಸಿದ ಆರ್.ಬಿ.ಐ ಬ್ಯಾಕ್ ಸಾಲಗಾರರಿಗೆ ಇಎಂಐ ಮತ್ತಷ್ಟು ದುಬಾರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.8. ಸತತ ಆರನೇ ಬಾರಿಗೆ ಭಾರತೀಯ ರಿಸರ್ವ್ ಬ್ಯಾಕ್ ತನ್ನ ರೆಪೋ ದರವನ್ನು ಏರಿಕೆ ಮಾಡಿದೆ. 25 ಮೂಲ ಅಂಶಗಳ ಏರಿಕೆಯೊಂದಿಗೆ ಶೇ. 6.5ಕ್ಕೆ ರೆಪೋ ದರವನ್ನು ಹೆಚ್ಚಳ ಮಾಡಿದೆ.

ರೆಪೋ ದರ ಏರಿಕೆಯಿಂದ ಗೃಹ, ವಾಹನ ಸಾಲಗಳ ಬ್ಯಾಂಕ್ ಗಳ ಇಎಂಐ ಮೊತ್ತ ಮತ್ತಷ್ಟು ದುಬಾರಿಯಾಗಲಿದೆ. ಠೇವಣಿ ಇರಿಸುವವರಿಗೆ ರೆಪೋ ದರ ಏರಿಕೆಯಿಂದ ಪ್ರಯೋಜನವಾಗಲಿದೆ.

ಆರ್ ಬಿಐನ ಹಣಕಾಸು ನೀತಿ ಸಮಿತಿ ಮೂರು ದಿನಗಳ ಸಭೆಯ ಬಳಿಕ ರೆಪೋ ದರ ಏರಿಕೆ ನಿರ್ಧಾರವನ್ನು ಆರ್ ಬಿ ಐ ಗವರ್ನರ್ ಶಕ್ತಿಕಾಂತ್ ದಾಸ್ ಬುಧವಾರ ಪ್ರಕಟಿಸಿದ್ದಾರೆ. ಆರು ಸದಸ್ಯರನ್ನೊಳಗೊಂಡ ಸಮಿತಿಯಲ್ಲಿ ನಾಲ್ವರು ಸದಸ್ಯರು ರೆಪೋ ದರ ಏರಿಕೆ ಪರವಾಗಿ ಮತ ಚಲಾಯಿಸಿದರು.

Also Read  ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ..!!!

 

error: Content is protected !!
Scroll to Top