ವೇತನ  ನೀಡದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ➤ ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.08. ವೇತನ ನೀಡದ್ದಕ್ಕೆ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಯಾರಿಗೂ ತಿಳಿಯದಂತೆ ಸಮಾಧಿ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ರಂಜಾನ್ (40) ಮತ್ತು ರಸೆಲ್ (24) ಬಂಧಿತ ವ್ಯಕ್ತಿಯಾಗಿದ್ದಾರೆ. ಕೆಲದಿನಗಳ ಹಿಂದೆ ಸೀಗೇಹಳ್ಳಿ ಹೆಚ್.ಪಿ.ಪೆಟ್ರೋಲ್ ಬಂಕ್ ಹಿಂಭಾಗದ ಕಾರ್ಮಿಕರ ಶೆಟ್ ನಲ್ಲಿ ಪಶ್ಚಿಮ ಬಂಗಾಳ ಮೂಲಕ ಎಂ.ಡಿ.ರಸೂಲ್ ಹವಾಲ್ದಾರ್ (30) ಆತ್ಮಹತ್ಯೆ ಮಾಡಿಕೊಂಡಿದ್ದ. ಆರೋಪಿಗಳು ಈ ವಿಚಾರವನ್ನು ಯಾರಿಗೂ ಹೇಳದಂತೆ ಇತರೆ ಕಾರ್ಮಿಕರಿಗೆ ಬೆದರಿಸಿ, ಮೃತದೇಹವನ್ನು ಖಾಜಿಸೊನ್ನೇನಹಳ್ಳಿಯ ಖಬರಸ್ತಾನದಲ್ಲಿ ಹೂತಿದ್ದರು ಎಂದು ತಿಳಿದು ಬಂದಿದೆ.

Also Read  13 ಲಕ್ಷ ರೂ. ಖರ್ಚು ಮಾಡಿ ನಾಯಿಯಾದ ಮಾನವ

 

error: Content is protected !!
Scroll to Top