ಉಜಿರೆಯ ವಸತಿಗೃಹದ ಮೇಲೆ ದಾಳಿ, ವೇಶ್ಯಾವಾಟಿಕೆ ದಂಧೆ ಭೇದಿಸಿದ ಪೊಲೀಸರು ➤ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು,ಫೆ.08. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಪ್ರದೇಶದ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗರಿಕ ಸಮಾಜ ಸಂಘಟನೆಯ ಕಾರ್ಯಕರ್ತರಿಂದ ಮಾಹಿತಿ ಪಡೆದು ದಾಳಿ ನಡೆಸಿ ಐವರು ಮಹಿಳೆಯರನ್ನು ರಕ್ಷಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಅಮತೆ ವಿಕ್ರಮ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪ ಎಸ್‌ಪಿ ಪ್ರತಾಪ್ ಸಿಂಗ್ ಥೋರಟ್ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿತು.ಈ ಸಂಬಂಧ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಪರಿಹಾರ ನೀಡದ ಕಾರಣ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ

 

.

 

 

error: Content is protected !!
Scroll to Top